ಶ್ರೀನಗರದಲ್ಲಿ ಮೂವರು ಹೈಬ್ರಿಡ್ ಉಗ್ರರ ಬಂಧನ: ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಭಾನುವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಭಾನುವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಹೊರವಲಯದಲ್ಲಿ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದ್ದು, ಉಗ್ರರಿಂದ ಮೂರು ಎಕೆ ರೈಫಲ್‌ಗಳು, ಎರಡು ಪಿಸ್ತೂಲ್‌ಗಳು, ಒಂಬತ್ತು ಮ್ಯಾಗಜೀನ್‌ಗಳು ಮತ್ತು 200 ಸುತ್ತುಗಳ ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಕುರಿತು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದು, "ಸೇನೆ ಮತ್ತು ಶ್ರೀನಗರ ಪೊಲೀಸರು ಮೂವರು ಹೈಬ್ರಿಡ್ ಭಯೋತ್ಪಾದಕರನ್ನು ಶ್ರೀನಗರದ ಹೊರವಲಯದಲ್ಲಿ ಬಂಧನಕ್ಕೊಳಪಡಿಸಿದ್ದು, 03 ಎಕೆ ರೈಫಲ್‌ಗಳು, 02 ಪಿಸ್ತೂಲ್‌ಗಳು, 09 ಮ್ಯಾಗಜೀನ್‌ಗಳು ಮತ್ತು 200 ಸುತ್ತುಗಳ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


