ಅತ್ಯಾಚಾರದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು
38 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಸಂಬಂಧ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವರಾದ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಧಾರ್: 38 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಸಂಬಂಧ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವರಾದ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಆರೋಪಿಯ ಪತ್ನಿಯಂತೆ ನಾನು ಜೀವನ ನಡೆಸುತ್ತಿದ್ದೆ. ಆತ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ನೀಡಿರುವ ದೂರಿನ ಮೇರೆಗೆ ಭಾನುವಾರ ಸಂಜೆ ಧಾರ್ ನಗರದ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಧಾರ್ ಎಸ್‌ಪಿ ಆದಿತ್ಯ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಗಂಧವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವ ಉಮಂಗ್ ಸಿಂಘಾರ್ ಈ ಬಗ್ಗೆ ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ.
ಮಧ್ಯ ಪ್ರದೇಶದ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ. ಸುದ್ದಿಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿ, ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಆದರೆ, ಮೇಲ್ನೋಟಕ್ಕೆ ಇದು 'ರಾಜಕೀಯ ಪ್ರೇರಿತ' ಪ್ರಕರಣವಾಗಿದೆ ಎಂದು ತೋರುತ್ತದೆ ಎಂದಿದ್ದಾರೆ.
ದೈಹಿಕ ಚಿತ್ರಹಿಂಸೆ, ಅತ್ಯಾಚಾರ, ನಿಂದನೆ, ಸ್ವಾಭಾವಿಕವಲ್ಲದ ಕೃತ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿ ವಿರುದ್ಧ ಮಹಿಳೆ ದೂರು ನೀಡಿರುವುದಾಗಿ ಎಸ್‌ಪಿ ಸಿಂಗ್ ತಿಳಿಸಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 294 (ಅಶ್ಲೀಲ ಕೃತ್ಯ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 376 (2) (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧಗಳು), 498 (ಎ) ( ಮಹಿಳೆಗೆ ಕಿರುಕುಳ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ವಿಡಿಯೋ ಹೇಳಿಕೆಯಲ್ಲಿ, ಸಿಂಘಾರ್ ವಿರುದ್ಧ ಅವರ ಪತ್ನಿಯು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಶಾಸಕನಿಗೆ ಇತರ ಪತ್ನಿಯರೂ ಇದ್ದಾರೆ ಎಂದು ಬಿಜೆಪಿ ನಾಯಕ ಮಿಶ್ರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


