ದೇಶ

ಜಮ್ಮು-ಕಾಶ್ಮೀರ: ಆರ್ ಎಸ್ ಪುರ ವಲಯದಲ್ಲಿ ಒಳನುಸುಳುಕೋರನ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದ ನುಸುಳುಕೋರನನ್ನು ಭದ್ರತಾ ಪಡೆ ಪೊಲೀಸರು ಮಂಗಳವಾರ ನಸುಕಿನ ಜಾವ ಕೊಂದು ಹಾಕಿದ್ದಾರೆ.

ಜಮ್ಮು-ಕಾಶ್ಮೀರ: ಆರ್ ಎಸ್ ಪುರ ವಲಯದಲ್ಲಿ ಒಳನುಸುಳುಕೋರನ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಪಾಕಿಸ್ತಾನದ ನುಸುಳುಕೋರನನ್ನು ಭದ್ರತಾ ಪಡೆ ಪೊಲೀಸರು ಮಂಗಳವಾರ ನಸುಕಿನ ಜಾವ ಕೊಂದು ಹಾಕಿದ್ದಾರೆ. 

ಈತ ಜಮ್ಮುವಿನ ಆರ್ ಎಸ್ ಪುರ ವಲಯದ ಅಂತಾರಾಷ್ಟ್ರೀಯ ಗಡಿಯ ಮೂಲಕ ಒಳನುಸುಳಿದ್ದ. ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ಬೇಲಿಯ ಹತ್ತಿರ ಸಮೀಪಿಸುವಾಗ ಅವನಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಆತ ಲೆಕ್ಕಿಸದೆ ಒಳನುಸುಳಿದಾಗ ಭದ್ರತಾ ಪಡೆ ಗುಂಡಿಕ್ಕಿ ಕೊಂದು ಹಾಕಿತು. 

ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದಿಂದ ಇದುವರೆಗೆ ದಾಳಿ ನಡೆದಿಲ್ಲ. ಪ್ರದೇಶವನ್ನು ಸುತ್ತುವರಿಯಲಾಗಿದ್ದು ಶೋಧಕಾರ್ಯ ಮುಂದುವರಿದಿದೆ ಎಂದು ಹಿರಿಯ ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.