ದೇಶ

ಡಿಎಂಕೆ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಬದಲಾವಣೆ, ಕಾರ್ಯದರ್ಶಿಯಾಗಿ ಸ್ಟಾಲಿನ್ ಪುತ್ರ ಮುಂದುವರಿಕೆ

ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಬುಧವಾರ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಅವರನ್ನು ಬದಲಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಹೆಲೆನ್ ಡೇವಿಡ್ಸನ್ ಅವರನ್ನು ನೇಮಕ ಮಾಡಿದೆ.

ಡಿಎಂಕೆ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಬದಲಾವಣೆ, ಕಾರ್ಯದರ್ಶಿಯಾಗಿ ಸ್ಟಾಲಿನ್ ಪುತ್ರ ಮುಂದುವರಿಕೆ
ಕನಿಮೋಳಿ
Published On :

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಬುಧವಾರ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ಕನಿಮೋಳಿ ಅವರನ್ನು ಬದಲಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಹೆಲೆನ್ ಡೇವಿಡ್ಸನ್ ಅವರನ್ನು ನೇಮಕ ಮಾಡಿದೆ.

ಇನ್ನು ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರನ್ನು ಪಕ್ಷದ ಯುವ ಘಟಕದ ಕಾರ್ಯದರ್ಶಿಯಾಗಿ ಮುಂದುವರೆಸಿದೆ.

ಡಿಎಂಕೆ ಮಹಿಳಾ ಘಟಕಕ್ಕೆ ನೂತನ ಮುಖ್ಯಸ್ಥರ ನೇಮಕ ಸೇರಿದಂತೆ ಹಲವಾರು ನೇಮಕಾತಿಗಳನ್ನು ಇಂದು ಪ್ರಕಟಿಸಲಾಗಿದ್ದು, ಕಳೆದ ತಿಂಗಳು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಕನಿಮೋಳಿ ಅವರನ್ನು ಮಹಿಳಾ ಘಟಕದ ಮುಖ್ಯಸ್ಥೆ ಸ್ಥಾನದಿಂದ ಕೈಬಿಡಲಾಗಿದೆ.

ಯುವ ಘಟಕಕ್ಕೆ ಒಂಬತ್ತು ಉಪ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸಚಿವ ದುರೈಮುರುಗನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.