ದೇಶ

ನಾಗಾಲ್ಯಾಂಡ್‌: ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್

ನಾಗಾಲ್ಯಾಂಡ್ ಪೊಲೀಸ್ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಸಿಬ್ಬಂದಿಯೊಬ್ಬರು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ನಾಗಾಲ್ಯಾಂಡ್‌: ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೊಲೀಸ್
ಸಾಂದರ್ಭಿಕ ಚಿತ್ರ
Published On :

ಕೊಹಿಮಾ: ನಾಗಾಲ್ಯಾಂಡ್ ಪೊಲೀಸ್ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಸಿಬ್ಬಂದಿಯೊಬ್ಬರು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪೆರೆನ್ ಜಿಲ್ಲೆಯ ಜಲುಕಿಯಲ್ಲಿ ಮಂಗಳವಾರ ರಾತ್ರಿ 8:30 ರ ಸುಮಾರಿಗೆ ಕರ್ತವ್ಯದಲ್ಲಿದ್ದ ಯೋಧ ಜೆನಿಸಿ ತನ್ನ ಎಸ್‌ಟಿಎಫ್ ಪಡೆಯ ಒಬ್ಬ ಸಹೋದ್ಯೋಗಿ ಮತ್ತು ನಾಗಾಲ್ಯಾಂಡ್ ಸಶಸ್ತ್ರ ಪೊಲೀಸ್ ಪಡೆಯ 10ನೇ ಇಂಡಿಯಾ ರಿಸರ್ವ್ ಬೆಟಾಲಿಯನ್‌ನ ಇನ್ನೊಬ್ಬ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆನಿಸಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಘಟನೆಯ ನಂತರ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹತ್ಯೆಯಾದವರನ್ನು ಎಸ್‌ಟಿಎಫ್‌ನ ಲ್ಯಾನ್ಸ್ ನೈಲ್ ಜೆವಾಂಗ್ಬಾ ಯಿಮ್ಖಿಯುಂಗ್ ಮತ್ತು 10ನೇ ಇಂಡಿಯಾ ರಿಸರ್ವ್ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ಕೆವಿಶೆಖೋ ಖಾಟೆ ಎಂದು ಗುರುತಿಸಲಾಗಿದೆ.

ಈ ಹತ್ಯೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.