ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಎಎಪಿ ಮುಖಂಡ ಸಂದೀಪ್ ಭಾರದ್ವಾಜ್ ಪತ್ತೆ
ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಎಪಿ ಟ್ರೇಡ್ ವಿಭಾಗದ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಪಶ್ಚಿಮ ದೆಹಲಿಯ ರೌಜೌರಿ ಗಾರ್ಡನ್ ನಲ್ಲಿರುವ ತನ್ನ ಮನೆಯಲ್ಲಿನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಯೊಂದಕ್ಕೆ ಸಾಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಎಪಿ ಟ್ರೇಡ್ ವಿಭಾಗದ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಪಶ್ಚಿಮ ದೆಹಲಿಯ ರೌಜೌರಿ ಗಾರ್ಡನ್ ನಲ್ಲಿರುವ ತನ್ನ ಮನೆಯಲ್ಲಿ
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಯೊಂದಕ್ಕೆ ಸಾಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಂದೀಪ್ ಭಾರದ್ವಾಜ್ ಅವರ ಮೃತದೇಹವನ್ನು ಮನೆಯಿಂದ ತರಲಾಗಿದೆ ಎಂದು ಆಸ್ಪತ್ರೆಯವರು ಪೊಲೀಸರಿಗೆ ಹೇಳಿರುವುದಾಗಿ ಡಿಸಿಪಿ ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ. ಅಪರಾಧ ತಂಡ ಸ್ಥಳಕ್ಕೆ ಧಾವಿಸಿದ್ದು, ಸಿಆರ್ ಪಿಸಿ ಸೆಕ್ಷನ್ 174 ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆ ನಡೆಸುತ್ತಿದೆ.
ಮೃತ ಭಾರದ್ವಾಜ್ ಮಾರ್ಬಲ್ಸ್ ಮಾಲೀಕರಾಗಿದ್ದು, ವಿಚ್ಛೇದಿತರಾಗಿದ್ದರು. ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


