ಡಿಜಿಟಲ್ ಮಾಧ್ಯಮ ನಿಯಂತ್ರಣಕ್ಕೆ ಶೀಘ್ರವೇ ಹೊಸ ಕಾನೂನು: ಸಚಿವ ಅನುರಾಗ್ ಠಾಕೂರ್
ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಜೈಪುರ್: ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಹಿಂದೆ ಸುದ್ದಿಗಳ ಏಕಮುಖ ಸಂವಹನವಿತ್ತು, ಆದರೆ ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳ ಬೆಳವಣಿಗೆಯೊಂದಿಗೆ, ಸುದ್ದಿ ಸಂವಹನವು ಬಹು ಆಯಾಮವಾಗಿದೆ ಎಂದು ಅವರು ಹೇಳಿದರು. ಈಗ ಒಂದು ಹಳ್ಳಿಯ ಸಣ್ಣ ಸುದ್ದಿಯೂ ಡಿಜಿಟಲ್ ಮಾಧ್ಯಮದ ಮೂಲಕ ರಾಷ್ಟ್ರೀಯ ವೇದಿಕೆಗೆ ತಲುಪುತ್ತದೆ ಎಂದು ಹೇಳಿದರು.
‘ಸದ್ಯ ದೇಶದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉತ್ತಮ ಭವಿಷ್ಯವಿದೆ ಹಾಗೂ ಸವಾಲುಗಳು ಕೂಡ ಇವೆ. ಇವೆರಡನ್ನು ಸರಿದೂಗಿಸಲು ಹೊಸ ಕಾನೂನಿನ ಅವಶ್ಯಕತೆ ಇದೆ’ ಎಂದು ಠಾಕೂರ್ ತಿಳಿಸಿದರು.ಬದಲಾವಣೆಗಳನ್ನು ಕಾನೂನಿನಲ್ಲಿ ತರಬೇಕು ಮತ್ತು ನಿಮ್ಮ ಕೆಲಸವನ್ನು ಸರಳಗೊಳಿಸಲು ನಾವು ಅದನ್ನು ತರುತ್ತೇವೆ ಎಂದಿದ್ದಾರೆ. ನಾವು ಮಸೂದೆಯನ್ನು ಪರಿಚಯಿಸಲು ಕೆಲಸ ಮಾಡುತ್ತಿದ್ದೇವೆ" ಎಂದು ಹಿಂದಿ ಸುದ್ದಿ ದಿನಪತ್ರಿಕೆ ಮಹಾನಗರ ಟೈಮ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಠಾಕೂರ್ ಹೇಳಿದರು.
‘ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ’ ಎಂದು ಅವರು ಜೈಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದರು.
‘ಇನ್ನು ಮುಂದೆ ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು. ಕೇಂದ್ರ ಸರ್ಕಾರವು ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಕಾಯ್ದೆ 1867ರ ಬದಲಿಗೆ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಇದರಿಂದ ಒಂದು ವಾರದಲ್ಲಿ ನೋಂದಣಿಗೆ ಅವಕಾಶ ನೀಡಲಾಗುವುದು. ಇದು ಸದ್ಯ ನಾಲ್ಕು ತಿಂಗಳು ತೆಗೆದುಕೊಳ್ಳುತ್ತದೆ. ಮುದ್ರಣ, ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗಳನ್ನು ಒಂದೇ ಸೂರಿನಡಿ ತರಲಾಗುವುದು ಎಂದು ಹೇಳಿದರು.
ಪತ್ರಿಕೆಗಳು ಸರಿಯಾದ ಸುದ್ದಿಗಳನ್ನು ಜನಸಾಮಾನ್ಯರ ಮುಂದೆ ಸರಿಯಾದ ಸಮಯದಲ್ಲಿ ತೆರೆದಿಡಬೇಕು. ಸರ್ಕಾರದ ಲೋಪದೋಷಗಳ ಜತೆಗೆ ಸರ್ಕಾರದ ಜನಕಲ್ಯಾಣ ಯೋಜನೆಗಳು, ನೀತಿಗಳು ಸಹ ಜನಸಾಮಾನ್ಯರಿಗೆ ತಲುಪಬೇಕು ಎಂದು ಕಿವಿಮಾತು ಹೇಳಿದರು.
ಮಾಧ್ಯಮಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸವನ್ನು ಮಾಡಬೇಕು ಸಮಾಜದಲ್ಲಿ ಭಯ ಮತ್ತು ಗೊಂದಲದ ವಾತಾವರಣ ನಿರ್ಮಾಣ ಮಾಡುವುದನ್ನು ತಪ್ಪಿಸಬೇಕು ಎಂದು ಅವರು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


