ದೇಶ

ಜಾಮಾ ಮಸೀದಿಯಲ್ಲಿ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಆದೇಶ ರದ್ದು, ವಿವಾದಾತ್ಮಾಕ ನಾಮಫಲಕ ತೆರವು

ರಾಷ್ಟ್ರ ರಾಜಧಾನಿ ಜಾಮಾ ಮಸೀದಿಯಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಆದೇಶವನ್ನು ರದ್ದುಪಡಿಸಲಾಗಿದೆ. ದೆಹಲಿ ಲೆಫ್ಟಿನೆಂಟ್ ಜನರಲ್ ಕೆ ಸಕ್ಸೇನಾ ಅವರೊಂದಿಗೆ ಮಾತನಾಡಿದ ನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಜಾಮಾ ಮಸೀದಿಯಲ್ಲಿ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಆದೇಶ ರದ್ದು, ವಿವಾದಾತ್ಮಾಕ ನಾಮಫಲಕ ತೆರವು
ಜಾಮಾ ಮಸೀದಿ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ಜಾಮಾ ಮಸೀದಿಯಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಆದೇಶವನ್ನು ರದ್ದುಪಡಿಸಲಾಗಿದೆ.  ದೆಹಲಿ ಲೆಫ್ಟಿನೆಂಟ್ ಜನರಲ್ ಕೆ ಸಕ್ಸೇನಾ ಅವರೊಂದಿಗೆ ಮಾತನಾಡಿದ ನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮಸೀದಿಯ ಪಾವಿತ್ರ್ಯತೆಯನ್ನು ಗೌರವಿಸುವ ಮತ್ತು  ಷರತ್ತಿನ ಮೇಲೆ ಜಾಮಾ ಮಸೀದಿಯ ಶಾಹಿ ಇಮಾಮ್ ಬುಖಾರಿ ಆದೇಶವನ್ನು ಹಿಂಪಡೆಯಲು ಒಪ್ಪಿಕೊಂಡರು ಎಂದು ಮೂಲಗಳು ಹೇಳಿವೆ.ಗುಂಪಾಗಿ ಅಥವಾ ಏಕಾಂಗಿಯಾಗಿ ಬರುವ ಹೆಣ್ಣು ಮಕ್ಕಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಾಮಾ ಮಸೀದಿಯ ಗೇಟ್ ಗಳ ಹೊರಗೆ ಆಡಳಿತ ಮಂಡಳಿಯಿಂದ ನಾಮಫಲಕ ಹಾಕಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. 

ಮಹಿಳಾ ಹಕ್ಕುಗಳ ಕಾರ್ಯಕರ್ತರು ಮಸೀದಿಯ ನಿರ್ಧಾರ ಸ್ವೀಕಾರಾರ್ಹವಲ್ಲ ಎಂದು ಬಣ್ಣಿಸಿದ್ದರಿಂದ ಈ ವಿಷಯವು ಕೆಲವು ಭಾಗಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಮಹಿಳಾ ಆಯೋಗ ಮಸೀದಿ ಆಡಳಿತ ಮಂಡಳಿಗೆ ನೋಟಿಸ್ ನೀಡಿತ್ತು. ಇದರಿಂದ ಎಚ್ಚೆತುಕೊಂಡ ಮಸೀದಿ ಆಡಳಿತ ಮಂಡಳಿ ವಿವಾದಾತ್ಮಾಕ ನಾಮಫಲಕವನ್ನು ತೆರವುಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.