'ಮರಾಠಿ'ಯಲ್ಲಿ ಎಂಬಿಬಿಎಸ್ ಪುಸ್ತಕ: 7 ಸದಸ್ಯರ ಸಮಿತಿ ರಚಿಸಿದ ಮಹಾರಾಷ್ಟ್ರ ಸರ್ಕಾರ
ಮರಾಠಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸಲು ಮಹಾರಾಷ್ಟ್ರ ಸರ್ಕಾರ ಏಳು ಸದಸ್ಯರ ಸಮಿತಿ ರಚಿಸಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮುಂಬೈ: ಮರಾಠಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸಲು ಮಹಾರಾಷ್ಟ್ರ ಸರ್ಕಾರ ಏಳು ಸದಸ್ಯರ ಸಮಿತಿ ರಚಿಸಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ಎಂಬಿಬಿಎಸ್(ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ) ಕೋರ್ಸ್‌ಗಾಗಿ ಹಿಂದಿಯಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮರಾಠಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡಲು ಮುಂದಾಗಿದೆ.
ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಜಂಟಿ ನಿರ್ದೇಶಕ ಅಜಯ್ ಚಂದನ್‌ವಾಲೆ ಅವರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಹಿಂದಿಯಲ್ಲಿ ಪ್ರಕಟಿಸಿದ ಮಧ್ಯಪ್ರದೇಶದ ಅಧಿಕಾರಿಗಳೊಂದಿಗೆ ನಾವು ಮಾತನಾಡಿದ್ದೇವೆ. ಮುಂದಿನ ಹಂತದಲ್ಲಿ ಮಹಾರಾಷ್ಟ್ರದಲ್ಲಿ ಸಮಿತಿ ಸದಸ್ಯರ ಮೊದಲ ಸಭೆ ನಡೆಸಿ ಮರಾಠಿಯಲ್ಲಿ ಪುಸ್ತಕ ಪ್ರಕಟಣೆಯ ಮಾರ್ಗಸೂಚಿ ಕುರಿತು ಚರ್ಚಿಸಲಾಗುವುದು. ಮುಂದಿನ ವಾರ ಮುಂಬೈನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


