ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಸಿಲುಕಿಸಲು ಯತ್ನ: ದೆಹಲಿ ಸಿಎಂ ಕೇಜ್ರಿವಾಲ್
ಅಬಕಾರಿ ನೀತಿ ಹಗರಣದ "ನಕಲಿ" ಪ್ರಕರಣದಲ್ಲಿ ತಮ್ಮ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಲುಕಿಸಲು ಪ್ರಯತ್ನಿಸಲಾಗಿದೆ. ಆದರೆ ಸಿಬಿಐ ತನಿಖೆಯಲ್ಲಿ ಅವರ ವಿರುದ್ಧ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣದ "ನಕಲಿ" ಪ್ರಕರಣದಲ್ಲಿ ತಮ್ಮ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಲುಕಿಸಲು ಪ್ರಯತ್ನಿಸಲಾಗಿದೆ. ಆದರೆ ಸಿಬಿಐ ತನಿಖೆಯಲ್ಲಿ ಅವರ ವಿರುದ್ಧ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಮನೀಶ್ ಹೆಸರಿಲ್ಲ. ಇಡೀ ಪ್ರಕರಣ ನಕಲಿ. ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಒಟ್ಟು 800 ಅಧಿಕಾರಿಗಳು ನಾಲ್ಕು ತಿಂಗಳು ತನಿಖೆ ನಡೆಸಿದ್ದರೂ ಏನೂ ಸಿಕ್ಕಿಲ್ಲ. ಕೋಟ್ಯಂತರ ಬಡ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆಯನ್ನು ಮನೀಶ್ ಸಿಸೋಡಿಯಾ ನೀಡಿದ್ದಾರೆ. ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದ ವ್ಯಕ್ತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಮಾನಹಾನಿ ಮಾಡಲು ಸಂಚು ರೂಪಿಸಿದ್ದಕ್ಕೆ ನಾನು ವಿಷಾದಿಸುತ್ತೇನೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಇಬ್ಬರು ಉದ್ಯಮಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಅಬಕಾರಿ ನೀತಿ ಹಗರಣ ಪ್ರಕರಣದ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ.
ಸಿಬಿಐ ಎಫ್‌ಐಆರ್‌ನಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರು ಇದೆ. ಆದರೆ ಇಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರು ಇಲ್ಲ. ತನಿಖಾ ಸಂಸ್ಥೆಯು ತನಿಖೆ ಕೈಗೆತ್ತಿಕೊಂಡ 60 ದಿನಗಳಲ್ಲಿ ಸಲ್ಲಿಸಿದ ಮೊದಲ ಚಾರ್ಜ್‌ಶೀಟ್ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


