ದೇಶ

ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ: 50 ಅಂಗಡಿಗಳು ಭಸ್ಮ

ಉತ್ತರ ದೆಹಲಿಯ ಚಾಂದ್ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ: 50 ಅಂಗಡಿಗಳು ಭಸ್ಮ
ಚಾಂದಿನಿ ಚೌಕ್ ನಲ್ಲಿ ಅಗ್ನಿ ಅವಘಡ
Published On :

ದೆಹಲಿ: ಉತ್ತರ ದೆಹಲಿಯ ಚಾಂದ್ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಡುತ್ತಿದ್ದಾರೆ. ಅಗ್ನಿಶಾಮಕ ದಳದ ಪ್ರಕಾರ, ಗುರುವಾರ ರಾತ್ರಿ 9.19 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿತು ಮತ್ತು 40 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದವು.

ಈವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಶೇ.30ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರೆ ಅಂಗಡಿಗಳಿಗೂ ವ್ಯಾಪಿಸಿದೆ ಎನ್ನಲಾಗಿದೆ. ಇಲ್ಲಿಯವರೆಗೆ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದಾರೆ. ಬೆಂಕಿ ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.