ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ.
1949 ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ. 2015ಕ್ಕೂ ಮುನ್ನ ಈ ದಿನವನ್ನು ಕಾನೂನು ದಿನವಾಗಿ ಆಚರಿಸಲಾಗುತ್ತಿತ್ತು.
ಕಾರ್ಯಕ್ರಮದ ಭಾಗವಹಿಸುವ ಪ್ರಧಾನಿ ಮೋದಿ, ಇ-ಕೋರ್ಟ್ ಯೋಜನೆಯಡಿಯಲ್ಲಿ ಹೊಸ ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ(ಪಿಎಂಒ) ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿಯವರು ಪ್ರಾರಂಭಿಸುತ್ತಿರುವ ಉಪಕ್ರಮಗಳಲ್ಲಿ 'ವರ್ಚುವಲ್ ಜಸ್ಟೀಸ್ ಕ್ಲಾಕ್', 'ಜಸ್ಟಿಸ್' ಮೊಬೈಲ್ ಅಪ್ಲಿಕೇಶನ್ 2.0, ಡಿಜಿಟಲ್ ಕೋರ್ಟ್ ಮತ್ತು 'ಎಸ್3ವಾಎಸ್' ವೆಬ್‌ಸೈಟ್ ಚಾಲನೆ ಸಹ ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


