ಅಪ್ರಾಪ್ತ ಬಾಲಕಿಯ ಮೇಲೆ ಮಕ್ಕಳ ಆಶ್ರಮದ ನಿರ್ವಾಹನಿಂದ ಅತ್ಯಾಚಾರ, ಬಂಧನ!
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮೇಲೆ ಆಶ್ರಮದ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಿಕ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮೇಲೆ ಆಶ್ರಮದ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರು ದೂರು ನೀಡಿದ್ದಾರೆ ಎಂದು ಡಿಸಿಪಿ ಕಿರಣ್ ಕುಮಾರ್ ಚವಾಣ್ ತಿಳಿಸಿದ್ದಾರೆ. ಅವರ ದೂರಿನ ಮೇರೆಗೆ ನಿರ್ವಾಹಕನನ್ನು ಬಂಧಿಸಲಾಗಿದೆ. ಇತರ ವಿದ್ಯಾರ್ಥಿಗಳನ್ನು ಸಹ ವಿಚಾರಣೆಗೆ ಒಳಪಡಿಸಲಾಯಿತು. ಅದರಲ್ಲಿ ಐವರು ಲೈಂಗಿಕ ಕಿರುಕುಳದ ಬಗ್ಗೆ ಹೇಳಿದ್ದಾರೆ ಎಂದರು.
ನಾಸಿಕ್ ಜಿಲ್ಲೆಯ ಆಶ್ರಮದ ನಿರ್ವಾಹಕರೊಬ್ಬರ ಮೇಲೆ ಐವರು ಅಪ್ರಾಪ್ತರು ಸೇರಿದಂತೆ ಆರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಹರ್ಷಲ್ ಮೋರೆಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದರೊಂದಿಗೆ ಆತನ ವಿರುದ್ಧ ಐದು ವಿವಿಧ ವಿಭಾಗಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನ.23ರಂದು ಆಶ್ರಮ ನಡೆಸುತ್ತಿರುವ ಹರ್ಷಲ್ ಮೋರೆ ಎಂಬಾತನ ವಿರುದ್ಧ ನಾಸಿಕ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ನಾಸಿಕ್ ಡಿಸಿಪಿ ಕಿರಣ್ ಕುಮಾರ್ ಚವಾಣ್ ಹೇಳಿದ್ದಾರೆ. ಈ ಸಂಬಂಧ ಹರ್ಷಲ್ ಮೋರೆ ವಿರುದ್ಧ ಐಪಿಸಿ, ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಐದು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


