ದೇಶ

ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆ

ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್, ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
Published On :

ರಾಜ್ ಕೋಟ್: ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್,  ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತೆ ಬರುತ್ತಿದ್ದು, ಬೃಹತ್ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಲ್ಲಿದ್ದೇವೆ ಎಂದು ರಾಜ್ ಕೋಟ್ ಬಿಜೆಪಿ ಅಧ್ಯಕ್ಷ ಕಮಲೇಶ್ ಮಿರಾನಿ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಮೋದಿ ಅವರನ್ನು ನೋಡಲು ಮತ್ತು ಅವರ ಮಾತನ್ನು ಜನರು ಇಷ್ಟಪಡಲಿದ್ದು, ರಾಜಕೋಟ್ ನ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು. 

ಮೋದಿ ಅವರು ಮೊದಲ ಬಾರಿಗೆ ರಾಜ್ ಕೋಟ್ ನಿಂದ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಅವರಿಗೆ ಆ ಕ್ಷೇತ್ರದ ಬಗ್ಗೆ ಅತ್ಯಂತ ಮೃಧು ಧೋರಣೆ ಇರುವುದರ ಜೊತೆಗೆ ಈ ಕ್ಷೇತ್ರಕ್ಕಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇಲ್ಲಿನ ಸಾರ್ವಜನಿಕ ಸಮಾವೇಶ ಯಶಸ್ವಿಯಾಗುವ ವಿಶ್ವಾಸ ಹೊಂದಿದ್ದು, ರಾಜ್ ಕೋಟ್ ನೆಲದಿಂದ ಭಾರತೀಯ ಜನತಾ ಪಕ್ಷ ಮತ್ತೆ ಗೆಲ್ಲಲಿದೆ ಎಂದರು. ನಾಳೆ ಸಂಜೆ 6 ಗಂಟೆಗೆ ಮೋದಿ ರಾಜಕೋಟ್ ಗೆ ಬರಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು. 

ಈ ಹಿಂದೆ ಅಕ್ಟೋಬರ್ ತಿಂಗಳಲ್ಲಿ ರಾಜ್ ಕೋಟ್ ನಲ್ಲಿ 4,309 ಕೋಟಿ ಮತ್ತು ಮೋರ್ಬಿ ಜಿಲ್ಲೆಯಲ್ಲಿ ರೂ. 2,738 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದ್ದರು.  ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.