ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ ವೇಣುಗೋಪಾಲ್ ಕೈಕಾಲಿಗೆ ಪೆಟ್ಟು
ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ಭೋಪಾಲ್: ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಿಲುಕಿದ ವೇಣುಗೋಪಾಲ್ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿವೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ.
ವರದಿಗಳ ಪ್ರಕಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಉತ್ಸುಕರಾದ ಜನರು ಧಾವಿಸಿದ್ದರಿಂದ ಜನಸಂದಣಿ ಉಂಟಾಗಿದೆ. ಆದರೆ ಪೊಲೀಸರು ಗುಂಪನ್ನು ನಿಯಂತ್ರಿಸಲು ವಿಫಲರಾದರು. ಹೀಗಾಗಿ ಇದು ಕಾಲ್ತುಳಿತಕ್ಕೆ ಕಾರಣವಾಯಿತು.
ವೇಣುಗೋಪಾಲ್ ಅವರು ಭಾರತ್ ಜೋಡೋ ಯಾತ್ರೆಗಾಗಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


