ಗುಜರಾತ್ ಚುನಾವಣೆ: 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ- ಮೆವಾನಿ
ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಹಮದಾಬಾದ್: ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ದೇಶಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್ 1 ಮತ್ತು 5 ರಂದು ನಡೆಯಲಿರುವ ಎರಡು ಹಂತಗಳ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ 120 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಅವರು ಸುದ್ದಿಸಂಸ್ಥೆ ಪಿಟಿಐ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಚುನಾವಣೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ನಿರಂಕುಶ ಪ್ರಭುತ್ವದ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ವದಾಗಂ ಕ್ಷೇತ್ರದಿಂದ ಪುನರ್ ಆಯ್ಕೆ ಬಯಸಿರುವ 41 ವರ್ಷದ ಮೆವಾನಿ, ಈ ಬಾರಿ ಕಾಂಗ್ರೆಸ್ ಟಿಕೆಟ್ ಮೇಲೆ ಚುನಾವಣಾ ಕಣಕ್ಕಿಳಿದಿದ್ದಾರೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿದ್ದರು.
ಈ ಬಾರಿ ಸೈಲೆಂಟ್ ಕ್ರಾಂತಿಯಾಗಲಿದ್ದು, ಜನರ ಮನಸ್ಥಿತಿ ಬದಲಾಗಿದೆ. ಪ್ರಧಾನಿ ಮೋದಿ ಮೊದಲ ರಾಜಕೀಯದಿಂದ ನಿವೃತ್ತಿಯಾಗಬೇಕಿದೆ. ಅವರು ಹೊಸದಾಗಿ ಏನನ್ನೂ ಮಾಡಿಲ್ಲ. ಅವರಿಂದ ಜನರು ಹೆಚ್ಚಿನ ನಿರೀಕ್ಷೆ ಹೊಂದಿಲ್ಲ ಎಂದು ಮೆವಾನಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


