'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ 53ನೇ ಐಎಫ್ಎಫ್ಐ ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡವ್ ಲ್ಯಾಪಿಡ್ ಆಡಿದ್ದ ಮಾತು ವಿವಾದದ ಬೆಂಕಿ ಹಚ್ಚಿದ್ದು ಹಿಂದೂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ, ಮುಗ್ಧ ಕಾಶ್ಮೀರ ಪಂಡಿತರನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕೇಸು ದಾಖಲಿಸಿದ್ದಾರೆ.
ಅಡ್ವೊಕೇಟ್ ವಿನೀತ್ ಜಿಂದಾಲ್ ಎಂಬುವವರು ನಡವ್ ಲ್ಯಾಪಿಡ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121, 153, 153ಎ ಮತ್ತು ಬಿ, 295, 298 ಮತ್ತು 505ರಡಿಯಲ್ಲಿ ಕೇಸು ದಾಖಲಿಸಿದ್ದಾರೆ. 1990ರ ದಶಕದಲ್ಲಿ ಇಸ್ಲಾಂ ಭಯೋತ್ಪಾದಕರಿಂದ ಕಾಶ್ಮೀರ ಕಣಿವೆಯಲ್ಲಿ ಮುಗ್ಧ ಕಾಶ್ಮೀರ ಪಂಡಿತರನ್ನು ಕ್ರೂರವಾಗಿ ಹತ್ಯೆ ಮಾಡುತ್ತಿದ್ದರ ಮೇಲೆ ಬೆಳಕು ಚೆಲ್ಲುವ ಕಥೆ ದಿ ಕಾಶ್ಮೀರ್ ಫೈಲ್ಸ್. ಇಸ್ಲಾಂ ಭಯೋತ್ಪಾದಕರಿಂದ ಹಿಂದೂ ನರಮೇಧವಾಗಿದ್ದು ಅದನ್ನು ಚಿತ್ರದಲ್ಲಿ ತೋರಿಸಿರುವುದನ್ನು ಅಶ್ಲೀಲ, ಪ್ರಚಾರದ ಹುಚ್ಚು ಎಂದು ಕರೆದು ಭಾರತೀಯ ಹಿಂದೂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


