ದೇಶ

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ

ತನ್ನ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಪ್ರೇಯಸಿ, ಶ್ರದ್ಧಾ ವಾಕರ್ ಅವರನ್ನು ತುಂಡು ತಂಡಾಗಿ ಕತ್ತರಿಸಿದ ಆರೋಪಿ ಆಫ್ತಾಬ್ ಪೊನಾವಾಲಾನ ಮೇಲೆ ಕತ್ತಿ ಬೀಸಿ ಕೊಲಲ್ಲು ಯತ್ನ ನಡೆಸಲಾಗಿದೆ.

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ
ಪೊಲೀಸ್ ವ್ಯಾನ್ ಮೇಲೆ ದಾಳಿಗೆ ಯತ್ನಿಸುತ್ತಿರುವ ವ್ಯಕ್ತಿಗಳ ಚಿತ್ರ
Published On :

ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಪ್ರೇಯಸಿ, ಶ್ರದ್ಧಾ ವಾಕರ್ ಅವರನ್ನು ತುಂಡು ತಂಡಾಗಿ ಕತ್ತರಿಸಿದ ಆರೋಪಿ ಆಫ್ತಾಬ್ ಪೊನಾವಾಲಾನ ಮೇಲೆ ಕತ್ತಿ ಬೀಸಿ ಕೊಲಲ್ಲು ಯತ್ನ ನಡೆಸಲಾಗಿದೆ.

ರಾಷ್ಟ್ರ ರಾಜಧಾನಿಯ ವಿಧಿ ವಿಜ್ಞಾನ ಪ್ರಯೋಗಾಲಯದ ಹೊರಗಡೆ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಹಿಂದೂ ಸೇನೆ ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಹಂತಕನ ಹತ್ಯೆಗೆ ಯತ್ನಿಸಿದ್ದಾರೆ. 

ಆಫ್ತಾಬ್ ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನದ ಮೇಲೆ ಕತ್ತಿಯಿಂದ ದಾಳಿ ನಡೆಸಿ, ಬಾಗಿಲು ತೆಗೆಯಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೂಡಲೇ ವ್ಯಾನ್ ನಿಂದ ಇಳಿದ ಪೊಲೀಸರು ಗನ್ ತೋರಿಸುವ ಮೂಲಕ ದಾಳಿಕೋರರರು ಅಲ್ಲಿಂದ ತೆರಳುವಂತೆ ಮಾಡಿದ್ದಾರೆ. ಪೊಲೀಸ್ ವ್ಯಾನ್ ಸ್ಥಳ ತಲುಪುತ್ತಿದ್ದಂತೆಯೇ ಇಬ್ಬರು ದಾಳಿಕೋರರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.