ದೇಶ

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ; 6 ಮಂದಿ ದುರ್ಮರಣ

ಲಖನೌ-ಬಹ್ರೈಚ್ ಹೆದ್ದಾರಿ ಬಳಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ; 6 ಮಂದಿ ದುರ್ಮರಣ
ಅಪಘಾತಕ್ಕೀಡಾಗಿರುವ ಬಸ್.
Published On :

ಬಹ್ರೈಚ್ (ಉತ್ತರ ಪ್ರದೇಶ): ಲಖನೌ-ಬಹ್ರೈಚ್ ಹೆದ್ದಾರಿ ಬಳಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಟ್ರಕ್ ಲಖನೌ ಡಿಪೋ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಸಿಂಗ್ ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಮಂದಿ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬಸ್ ಲಖನೌದಿಂದ ರುಪೈದೀಹಾಗೆ ಹೋಗುತ್ತಿದ್ದು, ಟ್ರಕ್ ಬಹ್ರೈಚ್‌ನಿಂದ ಲಖನೌಗೆ ತೆರಳುತ್ತಿತ್ತು ಎಂದು ತಿಳಿಸಿದ್ದಾರೆ.

ಮೃತದೇಹಗಳನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.