ಆಗಸ್ಟ್ ನಲ್ಲಿ ಸುಮಾರು 23.28 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
ವಾಟ್ಸಾಪ್ ಆಗಸ್ಟ್ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಶನಿವಾರ ತಿಳಿಸಿದೆ.

ನವದೆಹಲಿ: ವಾಟ್ಸಾಪ್ ಆಗಸ್ಟ್ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಶನಿವಾರ ತಿಳಿಸಿದೆ.
ಇದು ಹಿಂದಿನ ತಿಂಗಳಿನಲ್ಲಿ ಮಾಡಲಾದ ನಿಷೇಧಕ್ಕಿಂತ ಕಡಿಮೆಯಾಗಿದೆ. ಜುಲೈನಲ್ಲಿ 23.87 ಲಕ್ಷ ಭಾರತೀಯ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿತ್ತು. 2022 ಆಗಸ್ಟ್ 1 ರಿಂದ ಆಗಸ್ಟ್ 31ರ ನಡುವೆ 23, 28000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಪೈಕಿ 10,08,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮುನ್ನವೇ ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ತನ್ನ ತಿಂಗಳು ಅನುಸರಣೆ ವರದಿಯಲ್ಲಿ ತಿಳಿಸಿದೆ.
91 ಫೋನ್ ನಂಬರ್ ನೊಂದಿಗೆ ಭಾರತೀಯ ಖಾತೆದಾರರನ್ನು ಗುರುತಿಸಲಾಗುತ್ತದೆ. ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳ ಪ್ರಕಾರ, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಸ್ವೀಕರಿಸಿದ ದೂರುಗಳ ವಿವರಗಳು ಮತ್ತು ತೆಗೆದುಕೊಂಡ ಕ್ರಮಗಳ ಅನುಸರಣೆ ವರದಿಗಳನ್ನು ಪ್ರಕಟಿಸಲು ಕಡ್ಡಾಯಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


