ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ರಾಜೀನಾಮೆ
ತಮ್ಮದೇ ಸರ್ಕಾರವನ್ನು ಟೀಕಿಸುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಜುಗರ ಉಂಟು ಮಾಡಿದ್ದ ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ತಮ್ಮದೇ ಸರ್ಕಾರವನ್ನು ಟೀಕಿಸುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಜುಗರ ಉಂಟು ಮಾಡಿದ್ದ ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.
ಸುಧಾಕರ್ ಸಿಂಗ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅವರ ತಂದೆ ಮತ್ತು ರಾಜ್ಯ ಆರ್‌ಜೆಡಿ ಅಧ್ಯಕ್ಷ ಜಗದಾನಂದ್ ಸಿಂಗ್ ಅವರು ಹೇಳಿದ್ದಾರೆ.
"ಸದಾ ರೈತರ ಪರವಾಗಿ ಧ್ವನಿ ಎತ್ತುತ್ತಿರುವ" ಕೃಷಿ ಸಚಿವರು ಮೈತ್ರಿ ಸರ್ಕಾರದಲ್ಲಿ "ಬಿರುಕು ಹೆಚ್ಚಾಗದಂತೆ" ತಡೆಯಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜಗದಾನಂದ್ ಸಿಂಗ್ ತಿಳಿಸಿದ್ದಾರೆ.
ಇದನ್ನು ಓದಿ: ಬಿಹಾರ ಸಿಎಂ ಆಗುವ ಯಾವುದೇ ಆತುರ ಇಲ್ಲ: ತೇಜಸ್ವಿ ಯಾದವ್
ತಮ್ಮದೇ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸುಧಾಕರ್ ಸಿಂಗ್ ಅವರು, ನಮ್ಮ ಕೃಷಿ ಇಲಾಖೆಯಲ್ಲಿ ಕಳ್ಳತನ ಮಾಡದೇ ಇರುವ ಒಂದೇ ಒಂದು ವಿಭಾಗವೂ ಇಲ್ಲ. ನಾನು ಇಲಾಖೆಯ ಉಸ್ತುವಾರಿ ಹೊತ್ತಿರುವುದರಿಂದ ನಾನೇ ಇದರ ನಾಯಕ. ನನ್ನ ಮೇಲೆ ಇನ್ನೂ ಅನೇಕ ನಾಯಕರಿದ್ದಾರೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


