ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಗರ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಸಾಗರ್-ಭೋಪಾಲ್ ರಸ್ತೆಯಲ್ಲಿರುವ ಬರ್ಖೇಡಿ ಗ್ರಾಮದ ಬಳಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ರಹತ್ಗಢ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ರಾಜ್ ಹೇಳಿದ್ದಾರೆ.
ಮೃತರನ್ನು ಮೋಹಿತ್ ಶುಕ್ಲಾ (38), ಅವರ ಪತ್ನಿ ರಕ್ಷಾ ಶುಕ್ಲಾ (36) ಮತ್ತು 11 ಹಾಗೂ 7 ವರ್ಷ ವಯಸ್ಸಿನ ಅವರ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ತಮ್ಮ ತವರೂರು ಹರ್ದಾಗೆ ಹಿಂತಿರುಗುತ್ತಿದ್ದರು. ಕಾರು ಚಲಾಯಿಸುತ್ತಿದ್ದ ಪಂಕಜ್ ಶುಕ್ಲಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಟ್ರಕ್ನ ಚಾಲಕ ಪಾನಮತ್ತನಾಗಿದ್ದ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


