ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಅಧಿಕೃತವಾಗಿ ಪ್ರಚಾರ ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷೀಯ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದಿನಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದಿನಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಖರ್ಗೆ, ಉದಯಪುರದಲ್ಲಿ ಪಕ್ಷ ಕೈಗೊಂಡ ಒಬ್ಬ ವ್ಯಕ್ತಿ ಒಂದು ಹುದ್ದೆ ನಿರ್ಣಯದಂತೆ ನಾಮಪತ್ರ ಸಲ್ಲಿಸಿದ ದಿನವೇ ರಾಜ್ಯಸಭೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಎದುರಾಳಿ ವಿರುದ್ಧವಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ, ಪಕ್ಷವನ್ನು ಬಲಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಟೀಕೆ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ನಿರುದ್ಯೋಗ, ಹಣದುಬ್ಬರ ಏರಿಕೆ ಕುರಿತು ಆಡಳಿತಾರೂಢ ಪಕ್ಷ ನೀಡಿದ ಎಲ್ಲಾ ಭರವಸೆಗಳು ಈಡೇರಿಲ್ಲ ಎಂದರು.
ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಪರ ಪ್ರಚಾರವಾಗಿ ಮೂವರು ಪಕ್ಷದ ಮುಖಂಡರು ವಕ್ತಾರರ ಸ್ಥಾನವನ್ನು ತೊರೆದಿದ್ದಾರೆ. ದೀಪೆಂದರ್ ಎಸ್ ಹೂಡಾ, ಸೈಯದ್ ನಾಸೀರ್ ಹುಸೇನ್ ಮತ್ತು ಗೌರವ್ ವಲ್ಲಭ್ ಅಧಿಕೃತ ರಾಷ್ಟ್ರ ವಕ್ತಾರರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಬೇಕು, ಈ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕು ಎಂದು ಗೌರವ್ ವಲ್ಲಭ್ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


