ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ: ದೇವೇಂದ್ರ ಫಡ್ನವಿಸ್
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ತಿಳಿಸಿದ್ದಾರೆ.

ನಾಗ್ಪುರ: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ಮುಖ್ಯಮಂತ್ರಿ ವಿರುದ್ಧದ ಎಲ್ಲಾ ಬೆದರಿಕೆಗಳನ್ನು ತಮ್ಮ ನೇತೃತ್ವದ ರಾಜ್ಯ ಗೃಹ ಇಲಾಖೆಯು ಅರಿತುಕೊಂಡಿದೆ. ಮುಖ್ಯಮಂತ್ರಿಗೆ ಭದ್ರತೆ ಮತ್ತು ಮತ್ತಿತರ ಅಂಶಗಳ ಬಗ್ಗೆ ಸಂಪೂರ್ಣ ಗಮನಹರಿಸುತ್ತಿದ್ದೇವೆ. ನೆನ್ನೆ ಧಮ್ಕಿ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಏಕೆಂದರೆ ಮುಖ್ಯಮಂತ್ರಿಗಳ ಭದ್ರತೆ ಬಹಳ ಮುಖ್ಯ' ಎಂದು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಗೆ ಸಂಬಂಧಿಸಿದಂತೆ ಫಡ್ನವಿಸ್ ವಿವರಗಳನ್ನು ಹಂಚಿಕೊಳ್ಳದಿದ್ದರೂ, ಪುಣೆಯ ಲೋನಾವಾಲಾದ ಹೋಟೆಲ್‌ನಲ್ಲಿ ಸಿಎಂ ಶಿಂಧೆಯನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅವಿನಾಶ್ ವಾಘಮಾರೆ ಎಂಬ ವ್ಯಕ್ತಿ ಮದ್ಯ ಸೇವಿಸಿದ್ದು, ನೀರಿನ ಬಾಟಲಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ಮೇಲೆ ಹೋಟೆಲ್ ಮಾಲೀಕರಿಗೆ 'ಪಾಠ ಕಲಿಸಲು' ಶನಿವಾರ ಕರೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿಯ ಜೀವಕ್ಕೆ ಬೆದರಿಕೆಯ ಕುರಿತು ರಾಜ್ಯ ಗುಪ್ತಚರ ಇಲಾಖೆ (ಎಸ್‌ಐಡಿ) ಶನಿವಾರ ನಿರ್ದಿಷ್ಟ ಮಾಹಿತಿ ಪಡೆದಿದ್ದು, ನಂತರ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. Z+ ಭದ್ರತೆಯನ್ನು ಹೊಂದಿರುವ ಸಿಎಂಗೆ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಎಸ್‌ಐಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಥಾಣೆಯಲ್ಲಿರುವ ಶಿಂಧೆ ಅವರ ಖಾಸಗಿ ನಿವಾಸ ಮತ್ತು ಮುಂಬೈನ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ನಗರಾಭಿವೃದ್ಧಿ ಸಚಿವ ಮತ್ತು ನಕ್ಸಲಿಸಂ ಪೀಡಿತ ಗಡ್ಚಿರೋಲಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಶಿಂಧೆ ಅವರಿಗೆ ಕಳೆದ ಅಕ್ಟೋಬರ್‌ನಲ್ಲಿ ನಕ್ಸಲೀಯರು ಕಳುಹಿಸಿದ್ದಾರೆ ಎಂದು ಶಂಕಿಸಲಾದ ಬೆದರಿಕೆ ಪತ್ರ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


