ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ, ಪೈಲಟ್ ದುರ್ಮರಣ
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ದುರ್ಮರಣ ಹೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಇಂದು ನಡೆದಿದೆ.

ತವಾಂಗ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ದುರ್ಮರಣ ಹೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ಇಂದು ನಡೆದಿದೆ.
ತವಾಂಗ್ ಬಳಿ ಬೆಳಗ್ಗೆ 10-30 ರ ಸುಮಾರಿಲ್ಲಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಮತ್ತೋರ್ವ ಪೈಲಟ್ ಗೆ ವೈದ್ಯಕೀಯ ಚಿಕಿತ್ಸೆ ಮುಂದುವರೆದಿದೆ. ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಅವರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


