ದೇಶ

ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ.

ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ  ಒಟ್ಟು ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಸೇರಿದಂತೆ ದೇಶದಲ್ಲಿ 17 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5,28,733ಕ್ಕೆ ಏರಿಕೆಯಾಗಿದೆ.

ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,40,39,883ಕ್ಕೆ ಏರಿಕೆಯಾಗಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ  ಶೇ. 98.74ಕ್ಕೆ ಏರಿಕೆಯಾಗಿದ್ದು, ದೈನಂದಿನ ಮತ್ತು ವಾರದ ಪಾಸಿಟಿವಿಟಿ ದರ ಶೇ.  1.32 ರಷ್ಟಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.