ವಿಜಯದಶಮಿ: ರಾವಣ ದಹನ ವೇಳೆ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅವಘಡ
ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಬೆಂಕಿ ಹಚ್ಚಲಾಗಿದ್ದ ರಾವಣನ ದೊಡ್ಡ ಕಟೌಟ್ ವೊಂದು ನೆರೆದಿದ್ದವರ ಮೇಲೆ ಬಿದ್ದ ಘಟನೆ ಹರ್ಯಾಣದಲ್ಲಿ ನಡೆದಿದೆ.
ಹರ್ಯಾಣ ಯಮುನಾನಗರದಲ್ಲಿ ಸ್ಥಳೀಯರು ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ರಾವಣ ದಹನ ಬಳಿಕ ಬೆಂಕಿ ಹೊತ್ತಿಕೊಂಡಿದ್ದ ರಾವಣನ ಕಟೌಟ್ ನೋಡನೋಡುತ್ತಿದ್ದಂತೆಯೇ ಅಲ್ಲಿ ನೆರೆದಿದ್ದವರ ಮೇಲೆ ಬಿದ್ದಿದೆ.
ಇದನ್ನೂ ಓದಿ: ಕಾನ್ಪುರದಲ್ಲಿ ಲಂಕಾಪತಿ ರಾವಣನಿಗೆಂದೇ ವಿಶೇಷ ದೇವಾಲಯ
ಅದೃಷ್ಟವಶಾತ್ ಅಪಾಯದ ಮುನ್ಸೂಚನೆ ಅರಿತ ಜನ ಅಲ್ಲಿಂದ ಕೂಡಲೇ ಚದುರಿದ್ದಾರೆ. ಹೀಗಾಗಿ ಯಾರಿಗೂ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


