ಗುಜರಾತ್: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ಐಆರ್
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ನ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಹಮದಾಬಾದ್: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿ ಮಾಡಿದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ನ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಎಮ್ಮೆಗಳಿಗೆ ಡಿಕ್ಕಿ ಹೊಡೆದ ನಂತರ ಹಾನಿಗೊಳಗಾದ ಸೆಮಿ-ಹೈ ಸ್ಪೀಡ್ ರೈಲಿನ ಡ್ರೈವರ್ ಕೋಚ್ನ ನೋಸ್ ಕೋನ್ ಕವರ್ ಅನ್ನು ಮುಂಬೈನಲ್ಲಿ ಬದಲಾಯಿಸಲಾಗಿದೆ ಎಂದು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಹೇಳಿಕೆಯಲ್ಲಿ ತಿಳಿಸಿದೆ.
ಗುರುವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್ ಬಳಿ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ರೈಲು ಸುಮಾರು 11 ಇದ್ದ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ಎಮ್ಮೆಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ರೈಲಿನ ಮಾರ್ಗದಲ್ಲಿ ಬಂದ ಎಮ್ಮೆಗಳ ಅಪರಿಚಿತ ಮಾಲೀಕರ ವಿರುದ್ಧ ಆರ್ಪಿಎಫ್ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದೆ ಎಂದು ಅಹಮದಾಬಾದ್ ವಿಭಾಗದ ಡಬ್ಲ್ಯುಆರ್ನ ಹಿರಿಯ ವಕ್ತಾರ ಜಿತೇಂದ್ರ ಕುಮಾರ್ ಜಯಂತ್ ಹೇಳಿದ್ದಾರೆ.
ಇದುವರೆಗೆ ಎಮ್ಮೆಗಳ ಮಾಲೀಕರನ್ನು ಗುರುತಿಸಲು ರೈಲ್ವೆ ಪೊಲೀಸರಿಗೆ ಸಾಧ್ಯವಾಗಿಲ್ಲ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಜಾನುವಾರುಗಳ ಡಿಕ್ಕಿಯಲ್ಲಿ ರೈಲಿನ ಡ್ರೈವರ್ ಕೋಚ್ನ ನೋಸ್ ಕೋನ್ ಕವರ್ ಮತ್ತು ಅದರ ಮೌಂಟಿಂಗ್ ಬ್ರಾಕೆಟ್ಗಳು ಹಾನಿಗೊಳಗಾಗಿವೆ. ಆದಾಗ್ಯೂ, ರೈಲಿನ ಪ್ರಮುಖ ಭಾಗಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.
ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ರೈಲು ಇಂದು ಮುಂಬೈನಿಂದ ಹೊರಟಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಪಶ್ಚಿಮ ರೈಲ್ವೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ತಯಾರಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಲ್ಲಿ ಚಾಲನೆ ನೀಡಿದರು ಮತ್ತು ಮರುದಿನದಿಂದ ವಾಣಿಜ್ಯ ಚಾಲನೆ ಪ್ರಾರಂಭಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


