ಸಿಬಿಐ ನಂತರ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ: ತೇಜಸ್ವಿ ಯಾದವ್
ಸಿಬಿಐ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಅವರ ಹೆಸರಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಡಿಸಿಎಂ ಮತ್ತು ಲಾಲು ಪುತ್ರ ತೇಜಸ್ವಿ ಯಾದವ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದಕ್ಕೆ...

ಪಾಟ್ನಾ: ಸಿಬಿಐ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಅವರ ಹೆಸರಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಡಿಸಿಎಂ ಮತ್ತು ಲಾಲು ಪುತ್ರ ತೇಜಸ್ವಿ ಯಾದವ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದಕ್ಕೆ 'ಮಹಾಘಟಬಂಧನ್' ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಶನಿವಾರ ಹೇಳಿದ್ದಾರೆ.
ಈ ಹಿಂದೆ ಕೇಂದ್ರ ತನಿಖಾ ಸಂಸ್ಥೆಗಳು ತಮ್ಮ ನಿವಾಸದಲ್ಲಿಯೇ ಕಚೇರಿಗಳನ್ನು ತೆರೆಯಲಿ ಎಂದು ಅಪಹಾಸ್ಯ ಮಾಡಿದ್ದ ಆರ್‌ಜೆಡಿ ನಾಯಕ, ಸಿಬಿಐ ದಾಳಿ ನಂತರ, ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.
"ಬಿಹಾರದಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯು ನಿಸ್ಸಂಶಯವಾಗಿ ನಮ್ಮೊಂದಿಗೆ ಸಮಸ್ಯೆ ಎದುರಿಸುತ್ತಿದೆ. ಮಹಾಘಟಬಂಧನ್ ವಿರುದ್ಧ ಬಳಸಿಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದು ಅದು ತಿಳಿದಿದೆ. ಹಾಗಾಗಿ, ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ತನ್ನ ತಂತ್ರ ಮುಂದುವರೆಸಿದೆ" ಎಂದು ಯಾದವ್ ಹೇಳಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಲಾಲು, ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
"ನಾನು ಈಗ ಸಿಬಿಐ ಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಿಲ್ಲ. ಆದರೆ ಶೀಘ್ರದಲ್ಲೇ ನಮ್ಮ ಮನೆಗಳಿಗೆ ಇಡಿ ಕಳುಹಿಸಲಾಗುವುದು ಎಂದು ನಾನು ಹೇಳಲು ಬಯಸುತ್ತೇನೆ," ಎಂದು ಬಿಹಾರ ಡಿಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


