ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಪ್ರಕರಣ, 24 ಮಂದಿ ಸಾವು
ಸದ್ಯ ದೇಶದಲ್ಲಿ 29,251 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,40,51,228 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 2,797 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,09,257ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.
ಸದ್ಯ ದೇಶದಲ್ಲಿ 29,251 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,40,51,228 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 12 ಮಂದಿ ಸೇರಿದಂತೆ ದೇಶದಾದ್ಯಂತ 24 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,778 ಜನರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 1.05ರಷ್ಟಿದೆ.
ಸದ್ಯ ದೇಶದಲ್ಲಿ ಅಕ್ಟೋಬರ್ 7ಕ್ಕೆ ಕೊನೆಗೊಂಡಂತೆ 2,66,839 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 89,67,48,226 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


