ರಾಜಸ್ಥಾನ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ದೆಹಲಿಯ ಸೇನಾ ಭವನದಲ್ಲಿ ಕ್ಲಾಸ್-4 ಉದ್ಯೋಗಿಯಾಗಿ ನೇಮಕಗೊಂಡಿದ್ದ ರಾಜಸ್ಥಾನದ ನಿವಾಸಿ ರವಿ ಪ್ರಕಾಶ್ ಮೀನಾ ಅವರು ಪಾಕಿಸ್ತಾನಿ ಮಹಿಳಾ ಏಜೆಂಟ್‌ನಿಂದ ಹನಿ ಟ್ರ್ಯಾಪ್ ಗೆ ಒಳಗಾಗಿದ್ದರು. ಅವರು ಭಾರತೀಯ ಸೇನೆಯ ಬಗ್ಗೆ ಗೌಪ್ಯ ಮತ್ತು ಕಾರ್ಯತಂತ್ರದ ಮಾಹಿತಿಯನ್ನು ಪಾಕ್ ಮಹಿಳೆಯೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ರಾಜಸ್ಥಾನದ ಡಿಜಿಪಿ(ಗುಪ್ತಚರ), ಉಮೇಶ್ ಮಿಶ್ರಾ ಹೇಳಿದ್ದಾರೆ.
ತನ್ನ ಬ್ಯಾಂಕ್ ಖಾತೆಗೆ ಜಮೆಯಾದ ಹಣಕ್ಕೆ ಬದಲಾಗಿ ಆತ ಸಾಮಾಜಿಕ ಮಾಧ್ಯಮದ ಮೂಲಕ ಏಜೆಂಟ್‌ಗೆ ಮಾಹಿತಿ ನೀಡುತ್ತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಂಜಲಿ ತಿವಾರಿ ಎಂಬ ಹೆಸರಿನ ಪಾಕಿಸ್ತಾನಿ ಏಜೆಂಟ್, ತಾನು ಪಶ್ಚಿಮ ಬಂಗಾಳದಲ್ಲಿ ಭಾರತೀಯ ಸೇನಾ ಅಧಿಕಾರಿಯಾಗಿರುವುದಾಗಿ ಹೇಳಿಕೊಂಡಿದ್ದಾಳೆ ಎಂದು ಮಿಶ್ರಾ ಹೇಳಿದ್ದಾರೆ.
ರಾಜಸ್ಥಾನದ ಕರೌಲಿ ಜಿಲ್ಲೆಯ ಸಪೋತಾರಾ ಮೂಲದ ಮೀನಾ ಅವರನ್ನು ಗುಪ್ತಚರ ಸಂಸ್ಥೆಗಳು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಸಿಕ್ಕ ತಾಂತ್ರಿಕ ಪುರಾವೆಗಳು ಮತ್ತು ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್‌ನ ಪರಿಶೀಲನೆಯ ನಂತರ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


