ದೇಶ

ರಾಜಸ್ಥಾನ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಚುರು ಜಿಲ್ಲೆಯ ಸರ್ದರ್ಶಹರ್‌ನಿಂದ ಏಳು ಬಾರಿ ಶಾಸಕರಾಗಿದ್ದ ಭನ್ವರ್ ಲಾಲ್ ಶರ್ಮಾ ಅವರು ಭಾನುವಾರ ನಿಧನರಾಗಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ
ಭನ್ವರ್ ಲಾಲ್ ಶರ್ಮಾ
Published On :

ಜೈಪುರ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಚುರು ಜಿಲ್ಲೆಯ ಸರ್ದರ್ಶಹರ್‌ನಿಂದ ಏಳು ಬಾರಿ ಶಾಸಕರಾಗಿದ್ದ ಭನ್ವರ್ ಲಾಲ್ ಶರ್ಮಾ ಅವರು ಭಾನುವಾರ ನಿಧನರಾಗಿದ್ದಾರೆ.

77 ವರ್ಷದ ಭನ್ವರ್ ಲಾಲ್ ಶರ್ಮಾ ಅವರು ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಬಹು ಸೋಂಕುಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಜುಲೈ 2020 ರಲ್ಲಿ ಆಗಿನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನೇತೃತ್ವದ ಬಂಡಾಯಕ್ಕೆ ಸೇರಿದ 18 ಶಾಸಕರಲ್ಲಿ ಶರ್ಮಾ ಕೂಡ ಒಬ್ಬರಾಗಿದ್ದರು. 

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಕುರಿತ ಸಂಭಾಷಣೆಗಳನ್ನು ಒಳಗೊಂಡ ಕೆಲವು ಆಡಿಯೊ ಟೇಪ್‌ಗಳು ಸೋರಿಕೆಯಾದಾಗ ಉಂಟಾದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಶರ್ಮಾ ಅವರ ಹೆಸರು ಸಹ ಕೇಳಿಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.