ಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿ
ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮೈನ್‌ಪುರಿ: ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಬಾಲಕಿಯ ತಾಯಿಯ ಪ್ರಕಾರ, ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿ ವಾಸಿಸುವ ಅಭಿಷೇಕ್ ಎಂಬಾತ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ, ಆದರೆ ಸಂತ್ರಸ್ತೆ ಈ ವಿಚಾರವನ್ನು ಕುಟುಂಬದೊಂದಿಗೆ ಬಹಿರಂಗಪಡಿಸಿರಲಿಲ್ಲ. ಬಳಿಕ ಬಾಲಕಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆ ಗರ್ಭಿಣಿ ಎಂದು ತಿಳಿದುಬಂದಿದೆ.
ಈ ಸಂಬಂಧ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದು, ಬಾಲಕಿಯನ್ನು ಮದುವೆಯಾಗುವಂತೆ ಅಕ್ಟೋಬರ್ 6ರಂದು ಪಂಚಾಯಿತಿ ಆರೋಪಿಗೆ ತಿಳಿಸಿತ್ತು. ನಂತರ ಆರೋಪಿಯ ತಾಯಿ ಸಂತ್ರಸ್ತೆಯನ್ನು ತಮ್ಮ ಮನೆಗೆ ಕರೆದೊಯ್ದು ಆಕೆಯ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ಮೈನ್‌ಪುರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸೈಫೈಗೆ ಸೂಚಿಸಲಾಗಿದೆ.
ಪೊಲೀಸರು ಐಪಿಸಿ ಸೆಕ್ಷನ್ 307, 376 ಮತ್ತು ಪೊಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


