ಕೇರಳ: ಬುರ್ಖಾ ಧರಿಸಿ ಓಡಾಡುತ್ತಿದ್ದ ದೇವಾಲಯದ ಆರ್ಚಕ!
ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ದೇವಾಲಯದ ಆರ್ಚಕನೊಬ್ಬ ಜನರ ಕೈಗೆ ಸಿಕ್ಕಿ ಬಿದ್ದಿದ್ದು, ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 7 ರಂದು ಕೊಯಿಲ್ಯಾಂಡಿ ಜಂಕ್ಷನ್ ನಲ್ಲಿ ಬುರ್ಖಾ ಧರಿಸಿ ಓಡಾಡುತ್ತಿದ್ದ ದೇವಾಲಯದ ಆರ್ಚಕ ಜೀಷ್ಣು ನಂಬೊರ್ಥಿಯನ್ನು ಆಟೋ ಚಾಲಕರು ಪತ್ತೆ ಹಚ್ಚಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕೋಝಿಕೋಡ್: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ದೇವಾಲಯದ ಆರ್ಚಕನೊಬ್ಬ ಜನರ ಕೈಗೆ ಸಿಕ್ಕಿ ಬಿದ್ದಿದ್ದು, ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 7 ರಂದು ಕೊಯಿಲ್ಯಾಂಡಿ ಜಂಕ್ಷನ್ ನಲ್ಲಿ ಬುರ್ಖಾ ಧರಿಸಿ ಓಡಾಡುತ್ತಿದ್ದ ದೇವಾಲಯದ ಆರ್ಚಕ ಜೀಷ್ಣು ನಂಬೊರ್ಥಿಯನ್ನು ಆಟೋ ಚಾಲಕರು ಪತ್ತೆ ಹಚ್ಚಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರ್ಚಕ ಬುರ್ಖಾದಲ್ಲಿ ಇದುದ್ದನ್ನು ಕಂಡು ಚಕಿತಗೊಂಡ ಆಟೋ ಚಾಲಕರು, ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದಾಗ್ಯೂ, ಯಾವುದೇ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಆತನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ. ಆತನ ಕುಟುಂಬಸ್ಥರು ಠಾಣೆಗೆ ಬಂದ ನಂತರ ಠಾಣೆಯಿಂದ ಬಿಟ್ಟು ಕಳುಹಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಚಿಕನ್ ಪಾಕ್ಸ್ ನಿಂದ ಬುರ್ಖಾ ಧರಿಸಿ ಓಡಾಡುತ್ತಿದ್ದಾಗಿ ಆರ್ಚಕ ಪೊಲೀಸರಿಗೆ ಹೇಳಿದ್ದಾನೆ. ಪ್ರಾಥಮಿಕ ತನಿಖೆ ವೇಳೆಯಲ್ಲಿ ಚಿಕನ್ ಪಾಕ್ಸ್ ನ ಯಾವುದೇ ಲಕ್ಷಣ ಕಾಣಿಸಲಿಲ್ಲ. ಆತನ ಹೆಸರು, ವಿಳಾಸ ಮತ್ತಿತರ ಮಾಹಿತಿ ಸಂಗ್ರಹಿಸಿದ ನಂತರ ಠಾಣೆಯಿಂದ ಹೊರಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


