ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಂದು ಮರು ನಾಮಕರಣ ಮಾಡಿರುವುದಕ್ಕೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್: ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಂದು ಮರು ನಾಮಕರಣ ಮಾಡಿರುವುದಕ್ಕೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಓವೈಸಿ, ಟಿಪ್ಪು ಬ್ರಿಟಿಷರ ವಿರುದ್ಧ ಮೂರು ಯುದ್ಧ ಮಾಡಿದ್ದಕ್ಕೆ ಬಿಜೆಪಿಗೆ ಆಕ್ರೋಶವಿದೆ. ಮತ್ತೊಂದು ರೈಲಿಗೆ ಒಡೆಯರ್ ಹೆಸರಿಡಬಹುದಿತ್ತು. ಆದರೆ, ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಅಗತ್ಯವಿರಲಿಲ್ಲ ಎಂದಿದ್ದಾರೆ.
ಟಿಪ್ಪು ಪರಂಪರೆಯನ್ನು ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


