ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಂತ್ ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ಟ್ಯಾಂಗ್‌ಪಾವಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾಗ ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿದಾಳಿ ನಡೆಸಿದರು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆದವು.
ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ, ಹತ್ಯೆಯಾದ ಉಗ್ರರ ಗುರುತು ಮತ್ತು ಅವರು ಯಾವ ಸಂಘಟನೆಗೆ ಸೇರಿದವರು ಎಂದು ಪತ್ತೆಹಚ್ಚಲಾಗುತ್ತಿದೆ. ಗುಂಡಿನ ಚಕಮಕಿ ಶೋಧ ಕಾರ್ಯ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


