ಮತಾಂತರ ವಿವಾದ: ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್‌ಗೆ ಸಮನ್ಸ್
ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರಿಗೆ ದೆಹಲಿ ಪೊಲೀಸರು ಸೋಮವಾರ ಸಮನ್ಸ್ ನೀಡಿದ್ದು,...

ನವದೆಹಲಿ: ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರಿಗೆ ದೆಹಲಿ ಪೊಲೀಸರು ಸೋಮವಾರ ಸಮನ್ಸ್ ನೀಡಿದ್ದು, ಮಂಗಳವಾರ ಅವರನ್ನು ವಿಚಾರಣೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೆಲವರೊಂದಿಗೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮಾಜಿ ಸಚಿವರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಾಜರಿದ್ದ ಬಗ್ಗೆ ಮಾಜಿ ಸಚಿವರನ್ನು ಪ್ರಶ್ನಿಸಲಾಗುವುದು ಮತ್ತು ಅಲ್ಲಿ ನಿಜವಾಗಿ ಏನಾಯಿತು ಎಂಬುದರ ಕುರಿತು ಅವರಿಂದ ವಿವರಗಳನ್ನು ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ.
ಗೌತಮ್ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು. ವಿವಾದದ ನಂತರ ಅವರು ಭಾನುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಲು ಭಾರತೀಯ ಜನತಾ ಪಕ್ಷ ಈ ವಿಷಯವನ್ನು ಬಳಸಿಕೊಂಡಿತು ಮತ್ತು ಅವರನ್ನು 'ಹಿಂದೂ ವಿರೋಧಿ' ಎಂದು ಆರೋಪಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


