ದೇಶ

ಶಿವಸೇನೆ ಹೆಸರು, ಚುನಾವಣಾ ಚಿಹ್ನೆ ಬಳಕೆಗೆ ಇಸಿ ಆದೇಶ: ದೆಹಲಿ ಹೈಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ

ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸದಂತೆ ಹೇಳಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸೋಮವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಶಿವಸೇನೆ ಹೆಸರು, ಚುನಾವಣಾ ಚಿಹ್ನೆ ಬಳಕೆಗೆ ಇಸಿ ಆದೇಶ: ದೆಹಲಿ ಹೈಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
Published On :

ನವದೆಹಲಿ: ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸದಂತೆ ಹೇಳಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸೋಮವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಠಾಕ್ರೆ ಸಲ್ಲಿಸಿರುವ ಅರ್ಜಿಯು ಅಕ್ಟೋಬರ್ 8 ರಂದು ಚುನಾವಾಣಾ ಆಯೋಗ ನೀಡಿದ್ದ ಆದೇಶವನ್ನು ಪ್ರಶ್ನಿಸಿದೆ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕಕ್ಷಿದಾರರಿಗೆ ಯಾವುದೇ ವಿವರಣೆಯನ್ನು ನೀಡದೆ ಅಂಗೀಕರಿಸಲಾಗಿದೆ ಎಂದು ಪ್ರತಿಪಾದಿಸಿದೆ.

ಅರ್ಜಿಯು ಭಾರತೀಯ ಚುನಾವಣಾ ಆಯೋಗ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನ ಪ್ರತಿವಾದಿಗಳನ್ನಾಗಿಸಿದೆ.

ಮುಂದಿನ ಸೂಚನೆ ಬರುವವರೆಗೂ ಶಿವಸೇನೆಯ ಯಾವುದೇ ಬಣಗಳು ಪಕ್ಷದ ‘ಬಿಲ್ಲು ಮತ್ತು ಬಾಣ’ ಚಿನ್ಹೆ ಹಾಗೂ ಶಿವಸೇನೆ ಎಂಬ ಹೆಸರನ್ನು ಬಳಸುವಂತಿಲ್ಲ ಎಂದು ಚುನಾವಣಾ ಆಯೋಗ ಅಕ್ಟೋಬರ್ 8ರಂದು ಘೋಷಿಸಿತ್ತು. ಇದು ಶಿವಸೇನೆ ಪಕ್ಷದ ಹೆಸರು ಮತ್ತು ಚಿನ್ಹೆಗಾಗಿ ಗುದ್ದಾಡುತ್ತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಭಾರಿ ನಿರಾಸೆ ಉಂಟುಮಾಡಿತ್ತು.  

ತನ್ನ ಮಧ್ಯಂತರ ಆದೇಶದಲ್ಲಿ, ಮುಂಬರುವ ಚುನಾವಣೆಗಳಿಗೆ ಎರಡೂ ಬಣಗಳು ಹೊಸ ಹೆಸರುಗಳನ್ನು ಆಯ್ಕೆ ಮಾಡಬಹುದು ಮತ್ತು ಚಿಹ್ನೆಗಳನ್ನು ಹಂಚಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.