ದೇಶ

ಪ್ರಧಾನಿ ಮೋದಿಯವರ ಹಿಮಾಚಲ ಪ್ರದೇಶ ಭೇಟಿ ಕೇವಲ ಚುನಾವಣಾ ಗಿಮಿಕ್: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದನ್ನು ಕೇವಲ 'ಚುನಾವಣಾ ಗಿಮಿಕ್' ಎಂದು ಬಣ್ಣಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ 'ಭಯ'ದಿಂದಾಗಿಯೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಗುರುವಾರ ಹೇಳಿದೆ.

ಪ್ರಧಾನಿ ಮೋದಿಯವರ ಹಿಮಾಚಲ ಪ್ರದೇಶ ಭೇಟಿ ಕೇವಲ ಚುನಾವಣಾ ಗಿಮಿಕ್: ಕಾಂಗ್ರೆಸ್
ಪ್ರಾತಿನಿಧಿಕ ಚಿತ್ರ
Published On :

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದನ್ನು ಕೇವಲ 'ಚುನಾವಣಾ ಗಿಮಿಕ್' ಎಂದು ಬಣ್ಣಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ 'ಭಯಾನಕ ಭಯ'ದಿಂದಾಗಿಯೇ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಗುರುವಾರ ಹೇಳಿದೆ.

ಈ ವರ್ಷಾಂತ್ಯಕ್ಕೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಉಪಚುನಾವಣೆಯಲ್ಲಿ ನೆಲ ಕಚ್ಚಿರುವ ಬಿಜೆಪಿಗೆ ಹೀನಾಯವಾಗಿ ಸೋಲುವ ಕ್ಷಣಗಣನೆ ಆರಂಭವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 30 ರಂದು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ, ಬಿಜೆಪಿಯು ಮಂಡಿ ಲೋಕಸಭೆ ಮತ್ತು ಫತೇಪುರ್, ಅರ್ಕಿ ಮತ್ತು ಜುಬ್ಬಾಯಿ-ಕೊತ್ಕೈ ಮೂರು ವಿಧಾನಸಭಾ ಸ್ಥಾನಗಳನ್ನು ಕಳೆದುಕೊಂಡಿತ್ತು. ಇಷ್ಟೂ ಕಡೆಯಲ್ಲಿ ಕಾಂಗ್ರೆಸ್‌ ಜಯ ಸಾಧಿಸಿತ್ತು.

ಮೋದಿಯವರ ಉನಾ ಮತ್ತು ಚಂಬಾ ಭೇಟಿಯನ್ನು 'ಚುನಾವಣಾ ಗಿಮಿಕ್' ಎಂದು ಕರೆದ ಪ್ರತಿಭಾ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಮತ್ತು ಬಿಜೆಪಿ ಸೋಲುವ ಭಯದಲ್ಲಿರುವುದರಿಂದ ತರಾತುರಿಯಲ್ಲಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆತರುತ್ತಿದ್ದಾರೆ ಎಂದು ಹೇಳಿದರು.

ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ಅಧಿಕಾರ ಮತ್ತು ಜನರ ಹಣವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ರಾಜ್ಯವನ್ನು ಆರ್ಥಿಕ ದಿವಾಳಿತನದ ಅಂಚಿಗೆ ತಂದು ನಿಲ್ಲಿಸಲಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.