ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ
ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ನಾಯಕರು ನನ್ನ ಜೊತೆಗಿನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸ್ವಾಗತ ಕೋರಿದ್ದಾರೆ ಎಂದು ತರೂರ್ ಹೇಳಿದ್ದಾರೆ.
2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ಮತದಾರರನ್ನು ಮತ್ತೆ ಕರೆತರುವ ಗುರಿ ಹೊಂದಿದ್ದೇನೆ. ಎಐಸಿಸಿ ಅಧ್ಯಕ್ಷನಾಗಿ ಚುನಾಯಿತನಾದರೆ ಸಿಡಬ್ಲ್ಯೂಸಿ ಚುನಾವಣೆ ನಡೆಸಿ ಪಕ್ಷದ ಸಂವಿಧಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದಾಗಿ ಎಂದು ಅವರು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


