ಮಾಸ್ಕೋದಿಂದ ಹೊರಟಿದ್ದ ಏರೋಫ್ಲಾಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಮೇಲ್ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ವಿಮಾನವನ್ನು ಪರಿಶೀಲಿಸಲಾಗಿದೆ, ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.
ಈ ಕುರಿತು ಎಎನ್ಐ ಟ್ವೀಟ್ ಮಾಡಿದ್ದು, 'ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಕರೆ ಬಂದಿತ್ತು. ಬೆಳಗಿನ ಜಾವ 3.20ಕ್ಕೆ ವಿಮಾನವು ದೆಹಲಿ ತಲುಪಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ದೆಹಲಿ ಪೊಲೀಸ್' ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


