ಮಾವೋವಾದಿಗಳ ಜತೆ ಸಂಪರ್ಕ ಕೇಸ್: ದೆಹಲಿ ವಿವಿ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಖುಲಾಸೆ
ಮಾವೋವಾದಿಗಳ ಸಂಪರ್ಕ ಹೊಂದಿರುವ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.

ನಾಗ್ಪುರ: ಮಾವೋವಾದಿಗಳ ಸಂಪರ್ಕ ಹೊಂದಿರುವ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.
ಜಿ ಎನ್ ಸಾಯಿಬಾಬಾ ಮತ್ತು ಇತರ ಐವರನ್ನು ಖುಲಾಸೆಗೊಳಿಸಿದೆ ನ್ಯಾಯಾಲಯ ತಕ್ಷಣವೇ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ವ್ಹೀಲ್ ಚೇರ್ ಆಶ್ರಯ ಹೊಂದಿರುವ ಸಾಯಿಬಾಬಾ ಅವರು ಸದ್ಯ ನಾಗ್ಪುರ್ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ನ್ಯಾಯಮೂರ್ತಿಗಳಾದ ರೋಹಿತ್ ದೇವ್ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಸಾಯಿಬಾಬಾ ಅವರು ಅಪರಾಧಿ ಮತ್ತು ಜೀವಾವಧಿ ಶಿಕ್ಷೆ ವಿಧಿಸಿದ ಸೆಷನ್ ನ್ಯಾಯಾಲಯದ 2017 ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಅಂಗೀಕರಿಸಿತು. ಪ್ರಕರಣದ ಇತರ ಐವರು ಅಪರಾಧಿಗಳ ಮೇಲ್ಮನವಿಯನ್ನು ಸಹ ಪೀಠವು ಅಂಗೀಕರಿಸಿತು ಮತ್ತು ಅವರನ್ನು ಖುಲಾಸೆಗೊಳಿಸಿತು.
ಮೇಲ್ಮನವಿ ವಿಚಾರಣೆಗೆ ಮುನ್ನವೇ ಐವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಅಪರಾಧಿಗಳು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದೇ ಇದ್ದಲ್ಲಿ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠ ಸೂಚಿಸಿದೆ.
ಮಾರ್ಚ್ 2017 ರಲ್ಲಿ, ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ, ಪತ್ರಕರ್ತ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ವಿದ್ಯಾರ್ಥಿ ಸೇರಿದಂತೆ ಇತರರನ್ನು ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ಮತ್ತು ದೇಶದ ವಿರುದ್ಧ ಯುದ್ಧ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶಿಕ್ಷೆ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


