ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ
ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಅರಣ್ಯ ಪ್ರದೇಶದಲ್ಲಿ 10 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದ್ದು, ಕೊಲೆಗೂ ಮುನ್ನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮತ್ತು ಕಣ್ಗಾವಲು ಮೂಲಕ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಅಭಿಷೇಕ್ ಯಾದವ್ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ಕುಟುಂಬದ ಪ್ರಕಾರ, ಗುರುವಾರ ಮಧ್ಯಾಹ್ನ 3 ಗಂಟೆಗೆ ಬಾಲಕಿ ಆಟವಾಡಲು ಹೊರಗೆ ಹೋಗಿದ್ದಳು. ನಂತರ ಸಂಜೆ 5 ಗಂಟೆ ಸುಮಾರಿಗೆ ಆಕೆ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ತನ್ನ ಮನೆಯವರಿಗೆ ತಿಳಿಸುವ ಭಯದಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲು ಸದರ್ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


