'ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ'
ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ, ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಹೈದರಾಬಾದ್: ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ, ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಹಿಜಾಬ್ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದೆ. ಇದೀಗ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಇದರ ಬೆನ್ನಲ್ಲೇ ಅಸಾದುದ್ದೀನ್ ಒವೈಸಿ ಮತ್ತೆ ಹಿಜಾಬ್ ಪರ ಬ್ಯಾಟ್ ಬೀಸಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ತೆಗೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು. ಮುಸ್ಲಿಂ ಹೆಣ್ಣುಮುಕ್ಕಳು ಹಿಜಾಬ್ ಧರಿಸಲು ಇಚ್ಚಿಸುತ್ತಿದ್ದಾರೆ. ಹಿಜಾಬ್ ಧರಿಸಿದ್ದಾರೆ ಎಂದರೆ ಅವರ ಬುದ್ಧಿಶಕ್ತಿಯನ್ನು ಮುಚ್ಚುತ್ತಿದ್ದಾರೆ ಎಂದರ್ಥವಲ್ಲ.
ಹಿಜಾಬ್ ಧರಿಸುವಿಕೆಯಿಂದ ಮುಸ್ಲಿಂ ಮಹಿಳೆಯರು ಹಿಂದುಳಿಯುತ್ತಿದ್ದಾರೆ ಎಂಬ ವಾದವನ್ನು ಒವೈಸಿ ತಳ್ಳಿ ಹಾಕಿದ್ದಾರೆ. ದೇಶ ಅಭಿವೃದ್ಧಿಯಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕೊಡುಗೆಯೂ ಅಪಾರವಾಗಿದೆ. ಹೈದರಾಬಾದ್‌ನಲ್ಲಿ ಹಲವು ಮಹಿಳೆಯರು ಡ್ರೈವರ್ ಆಗಿ ವಾಹನ ಚಲಾಯಿಸುತ್ತಿದ್ದಾರೆ. ಅವರಿಗೆ ಯಾರೂ ಹಿಜಾಬ್ ಒತ್ತಾಯಪೂರ್ವಕವಾಗಿ ಹಾಕುತ್ತಿಲ್ಲ. ಅವರ ಆಯ್ಕೆಯಾಗಿದೆ ಎಂದು ಓವೈಸಿ ಹೇಳಿದ್ದಾರೆ.
ಹಿಂದೂ ಸಿಖ್, ಕ್ರಿಶ್ಚಿಯನ್ ಮಕ್ಕಳು ತಮ್ಮ ಧರ್ಮದ ಉಡುಪು ಧರಿಸಿ ಶಾಲೆಗೆ ತೆರಳಲು ಅನುಮತಿ ಇದೆ. ಆದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಯಾಕೆ? ಒಂದು ದಿನ ಹಿಜಾಬ್ ಧರಿಸಿದ ಮುಸ್ಲಿಮ್ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ. ಇದು ನನ್ನ ಕನಸು ಎಂದಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


