ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮನೆ ಮೇಲೆ ದಾಳಿ: 2 ಕಾರುಗಳು ಧ್ವಂಸ
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಎರಡು ಕಾರುಗಳನ್ನು ಧ್ವಂಸಗೊಳಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ನವದೆಹಲಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಎರಡು ಕಾರುಗಳನ್ನು ಧ್ವಂಸಗೊಳಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಈ ಕುರಿತು ಸ್ವತಃ ಸ್ವಾತಿ ಮಲಿವಾಲ್ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಮಾಹಿತಿ ನೀಡಿದ್ದಾರೆ.
ಈಗಷ್ಟೇ ಸ್ವಲ್ಪ ಗಂಟೆಗಳ ಹಿಂದೆ ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ನಡೆಸಿದ್ದು, ಎರಡು ಕಾರುಗಳನ್ನು ಧ್ವಂಸಗೊಳಿಸಿದ್ದಾರೆ. ʻಧ್ವಂಸಗೊಳಿಸಲಾದ ಎರಡು ಕಾರುಗಳಲ್ಲಿ ಒಂದು ನನಗೆ ಮತ್ತು ಇನ್ನೊಂದು ನನ್ನ ತಾಯಿಗೆ ಸೇರಿದ್ದು. ಮನೆಯ ಸುತ್ತ ಗಾಜಿನ ಚೂರುಗಳು ಬಿದ್ದಿದ್ದರಿಂದ ಮನೆ ಪ್ರವೇಶಿಸುವುದು ಕಷ್ಟವಾಯಿತು. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ನನ್ನ ತಾಯಿ ಮತ್ತು ನಾನು ಮನೆಯಲ್ಲಿ ಇರಲಿಲ್ಲ. ಇದ್ದಿದ್ದರೆ ಏನಾಗುತ್ತಿತ್ತು ಎಂದು ನನಗೆ ತಿಳಿದಿಲ್ಲ. ನೀವು ಏನು ಮಾಡಿದರೂ ನಾನು ಹೆದರುವುದಿಲ್ಲʼ ಎಂದು ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್'ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಪ್ರತಿಕ್ರಿಯೆ ನೀಡಿದ್ದು, ಕಳೆದ ಕೆಲವು ತಿಂಗಳುಗಳಲ್ಲಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಹದಗೆಟ್ಟಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರೂ ಸುರಕ್ಷಿತವಾಗಿಲ್ಲ. ಬಹಿರಂಗ ಕೊಲೆಗಳು ನಡೆಯುತ್ತಿವೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಸರಿಪಡಿಸಲು ಲೆಫ್ಟಿನೆಂಟ್ ಗವರ್ನರ್ ಸಾಹೇಬರು ಸ್ವಲ್ಪ ಸಮಯವನ್ನು ನೀಡುತ್ತಾರೆಂಬು ಭಾವಿಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


