ಈ ವರ್ಷಾಂತ್ಯಕ್ಕೆ ಮಾತೃಭಾಷೆಗಳಲ್ಲಿ ಕಾನೂನು ಪಠ್ಯಪುಸ್ತಕ ಪ್ರಕಟ
ಈ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಹೊರತರಲಿದೆ. ಆಯಾ ರಾಜ್ಯಗಳ ಜನತೆಯ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ.

ನವದೆಹಲಿ: ಈ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಹೊರತರಲಿದೆ. ಆಯಾ ರಾಜ್ಯಗಳ ಜನತೆಯ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಭಾಷೆಗಳ ಪ್ರಚಾರ ಉನ್ನತ ಸಮಿತಿಯ ಅಧ್ಯಕ್ಷ ಚಾಮು ಕೃಷ್ಣ ಶಾಸ್ತ್ರಿ, ಪ್ರಖ್ಯಾತ ಪ್ರೊಫೆಸರ್ ಗಳು ಕಾನೂನು ಪದವಿ ತರಗತಿ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಈ ಪುಸ್ತಕಗಳನ್ನು ಬರೆಯುತ್ತಿದ್ದಾರೆ ಎಂದರು.
ಪದವಿ ಕಾನೂನು ತರಗತಿಗಳ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಗಳಲ್ಲಿ ಪುಸ್ತಕ ಪ್ರಕಟಿಸುವ ಕೆಲಸಗಳನ್ನು ನಾವು ಮಾಡುತ್ತಿದ್ದೇವೆ. ಈ ವರ್ಷಾಂತ್ಯಕ್ಕೆ ಪುಸ್ತಕಗಳು ಪ್ರಕಟವಾಗಲಿದೆ. ಮಾತೃಭಾಷೆಗಳಲ್ಲಿ ಕಾನೂನು ಶಿಕ್ಷಣ ಪಡೆಯಬೇಕೆಂಬ ಇಚ್ಛೆಯಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬುದೇ ಇದರ ಉದ್ದೇಶ ಎಂದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಕಾನೂನು ಕಾಲೇಜುಗಳು ಮತ್ತು ಸಂಸ್ಥೆಗಳು ಈ ಕಾನೂನು ಪುಸ್ತಕಗಳನ್ನು ಪರಿಚಯಿಸಬಹುದು. ಅಕ್ಟೋಬರ್ 14 ರಂದು ಭಾರತೀಯ ಭಾಷಾ ಸಮಿತಿ ಅಥವಾ ಉನ್ನತಾಧಿಕಾರ ಸಮಿತಿಯು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರದಲ್ಲಿ 13 ಪ್ರಾದೇಶಿಕ ಭಾಷೆಗಳಲ್ಲಿ ಮೂಲ ಕಾನೂನು ಪುಸ್ತಕಗಳನ್ನು ಪ್ರಕಟಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಅಡಿಯಲ್ಲಿ ಭಾರತೀಯ ಭಾಷೆಗಳ ಸಮಗ್ರ ಮತ್ತು ಬಹುಶಿಸ್ತೀಯ ಅಭಿವೃದ್ಧಿಗಾಗಿ ತ್ವರಿತ ಮಾರ್ಗಗಳು ಮತ್ತು ಕ್ರಿಯಾ ಯೋಜನೆಗಳನ್ನು ಶಿಫಾರಸು ಮಾಡಲು ಈ ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಾಗಿದೆ. ಶಿಕ್ಷಾ ಸಂಸ್ಕೃತಿ ಉತ್ಥಾನ್ ನ್ಯಾಸ್ ಸಹಯೋಗದೊಂದಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಯುಜಿ ಕೋರ್ಸ್‌ಗಳಿಗೆ ಗುರುತಿಸಲಾದ 40 ಮತ್ತು ಪಿಜಿಗೆ 20 ವಿಷಯಗಳಿಗೆ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗುವುದು. ಆದಾಗ್ಯೂ, ಮೂಲ ಪುಸ್ತಕಗಳ ಹೊರತಾಗಿ ಅಗತ್ಯ ಕಾಯಿದೆಗಳು, ಶಾಸನಗಳು ಮತ್ತು ತೀರ್ಪುಗಳನ್ನು ಅನುವಾದಿಸಲು ನಿರ್ಧರಿಸಲಾಗಿದೆ ಎಂದು ಮೊನ್ನೆ ಅಕ್ಟೋಬರ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಖಿಲ ಭಾರತ ಕಾನೂನು ಮಂತ್ರಿಗಳು ಮತ್ತು ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಪ್ರಸ್ತಾಪಿಸಿದ್ದರು.
ಸುಲಭ ನ್ಯಾಯವನ್ನು" ತರಲು ಹೊಸ ಕಾನೂನುಗಳನ್ನು ಸ್ಪಷ್ಟ ರೀತಿಯಲ್ಲಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬೇಕು ಎಂದು ಒತ್ತಿಹೇಳಿದ್ದರು. ಇದರಿಂದಾಗಿ ಬಡವರು ಸಹ ಅವುಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಕಾನೂನು ಭಾಷೆ ನಾಗರಿಕರಿಗೆ ಅಡ್ಡಿಯಾಗಬಾರದು ಎಂಬುದು ಇದರ ಹಿಂದಿನ ಉದ್ದೇಶ ಎಂದು ಚಾಮೂ ಕೃಷ್ಣ ಶಾಸ್ತ್ರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


