ದೇಶ

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ

ಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ
ಕಾಂಗ್ರೆಸ್ ನಿಯೋಗ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗವೊಂದು ಸೋಮವಾರ  ಉದ್ಧವ್ ಠಾಕ್ರೆ ಹಾಗೂ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದು, ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದೆ. ಹೆಚ್. ಕೆ. ಪಾಟೀಲ್, ಅಶೋಕ್ ಚವಾಣ್, ಬಾಳಸಾಹೇಬ್ ಥೋರಟ್, ಸುರಾಜ್ ಠಾಕೂರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ನವೆಂಬರ್ ಮೊದಲ ವಾರದಲ್ಲಿ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯನ್ನು ಪ್ರವೇಶಿಸಲಿದ್ದು, ಈ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ನಿಯೋಗ ಉಭಯ ನಾಯಕರನ್ನು ಆಹ್ವಾನಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.