ಕೇದಾರನಾಥ ದೇಗುಲಕ್ಕೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು
ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ.
ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಲಿಕಾಪ್ಟರ್ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 8 ಮಂದಿ ಪೈಕಿ ಪೈಲಟ್ ಸೇರಿ 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆಂದು ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಲಿಕಾಪ್ಟರ್ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.
ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ, ತನಿಖೆಗೆ ಆದೇಶ
ಈ ನಡುವೆ ಘಟನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತಲುಪಿವೆ. ಈ ದುರಂತದ ಕುರಿತು ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


