ದೇಶ

ಗೋವಾ ಜಿಲ್ಲಾ ಪಂಚಾಯಿತಿ ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

ಗೋವಾದ ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದೆ...

ಗೋವಾ ಜಿಲ್ಲಾ ಪಂಚಾಯಿತಿ ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು
ಸಾಂದರ್ಭಿಕ ಚಿತ್ರ
Published On :

ಪಣಜಿ: ಗೋವಾದ ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು,ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾವೋರ್ಲಿಮ್, ರೀಸ್ ಮೈಗೊಸ್ ಮತ್ತು ಕಾರ್ತಲಿಂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಯಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಬಿಜೆಪಿ ಅಭ್ಯರ್ಥಿಗಳಾದ ಪರೇಶ್ ನಾಯ್ಕ್ (ದಾವೋರ್ಲಿಮ್) ಮತ್ತು ಸಂದೀಪ್ ಕಾಶಿನಾಥ್ ಬಾಂದೋಡ್ಕರ್ (ರೀಸ್-ಮೈಗೋಸ್) ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಮೆರ್ಸಿಯಾನಾ ಮೆಂಡೆಸ್ ಇ ವಾಜ್ (ಕಾರ್ತಲಿಂ) ಗೆಲುವು ಸಾಧಿಸಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಈ ಮೂರು ಕ್ಷೇತ್ರಗಳ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನ ಉಪ ಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.