ಅಮೆರಿಕಕ್ಕೆ ತೆರಳದಂತೆ ಕಾಶ್ಮೀರಿ ಪತ್ರಕರ್ತೆಯನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು
ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.
ಮಾನ್ಯತೆಗೊಂಡ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಮೆರಿಕಕ್ಕೆ ತೆರಳದಂತೆ ಅಧಿಕಾರಿಗಳು ತಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಕುರಿತು ರಾಯಿಟರ್ಸ್ ನಲ್ಲಿನ 28 ವರ್ಷದ ಫೋಟೋ ಜರ್ನಲಿಸ್ಟ್ ಸೋಮವಾರ ಪುಲಿಟ್ಜರ್ ಪ್ರಶಸ್ತಿ ಪಡೆಯಲು ನ್ಯೂಯಾರ್ಕ್ ಗೆ ತೆರಳಲು ನಿರ್ಧರಿಸಿದ್ದರು.
'ನ್ಯೂಯಾರ್ಕ್‌ನಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಹೊರಟಿದ್ದೆ ಆದರೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದರು. ಮಾನ್ಯವಾದ ಯುಎಸ್ ವೀಸಾ ಮತ್ತು ಟಿಕೆಟ್ ಹೊಂದಿದ್ದರೂ ಅಂತಾರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸಲಾಯಿತು ಎಂದು ಮಟ್ಟೂ ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶ ಪ್ರವಾಸವನ್ನು ನಿರ್ಬಂಧಿಸಲಾಗಿದೆ. ಕಾರಣವಿಲ್ಲದೆ ನನ್ನನ್ನು ವಿದೇಶಕ್ಕೆ ತೆರಳದಂತೆ ತಡೆಯಲಾಗಿದೆ.ಇದರಿಂದಾಗಿ ಜೀವನದಲ್ಲಿ ನನಗೆ ಒಮ್ಮೆ ಸಿಕ್ಕಿದ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


